ಶುಕ್ರವಾರ, ಆಗಸ್ಟ್ 14, 2020
23 °C

‘ಉಜ್ವಲ ಉದ್ಯಮಿ’ ಪ್ರಶಸ್ತಿಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಉಜ್ವಲ ಉದ್ಯಮಿ’ ಪ್ರಶಸ್ತಿಗೆ ಆಹ್ವಾನ

ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕಗಳ ಸಂಘವು (ಕಾಸಿಯಾ) ಉಜ್ವಲ ಉದ್ಯಮಿ ಪ್ರಶಸ್ತಿ–2018ಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಸಿಯಾ ಅಧ್ಯಕ್ಷ ಹುನುಮಂತೇ ಗೌಡ, ‘ಕಳೆದ ವರ್ಷದಿಂದ ಈ ಪ್ರಶಸ್ತಿಯನ್ನು ನೀಡುತ್ತಿದ್ದೇವೆ. ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಇದು ನಗದು ಬಹುಮಾನವನ್ನು ಒಳಗೊಂಡಿಲ್ಲ’ ಎಂದು ತಿಳಿಸಿದರು.

ಒಟ್ಟು 16 ವರ್ಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅವುಗಳಲ್ಲದೇ, 9 ವಿಶೇಷ ಪ್ರಶಸ್ತಿಗಳೂ ಇವೆ. ಮಯ್ಯಾಸ್‌ ಸಂಸ್ಥೆಯ ಅಧ್ಯಕ್ಷ ಸದಾನಂದ ಮಯ್ಯ ಅಧ್ಯಕ್ಷತೆಯಲ್ಲಿ ಪ್ರತಿಷ್ಠಿತ ಉದ್ಯಮ ಪ್ರತಿನಿಧಿಗಳು, ನಾಗರಿಕ ಸೇವಕರು, ವೃತ್ತಿಪರರನ್ನು ಒಳಗೊಂಡ ತೀರ್ಪುಗಾರರ ಸಮಿತಿ ರಚಿಸಲಾಗಿದೆ. ಮೇ 5ರಂದು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದರು.

ಆಸಕ್ತರು ಕಾಸಿಯಾ ವೆಬ್‌ಸೈಟ್‌ನಿಂದ ( www.kassia.com) ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಇದೇ 25ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.