‘ನಮ್ಮ ಮತ–ನಮ್ಮ ನಿರ್ಧಾರ’

7

‘ನಮ್ಮ ಮತ–ನಮ್ಮ ನಿರ್ಧಾರ’

Published:
Updated:

ಬೆಂಗಳೂರು: ‘ಸರ್ಕಾರಿ ಶಾಲೆಗಳ ಸಬಲೀಕರಣ ವರದಿ–2017ನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕೃತವಾಗಿ ಘೋಷಿಸುವ ಪಕ್ಷದ ಅಭ್ಯರ್ಥಿಗೆ ನಮ್ಮ ಮತ’ ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಘೋಷಿಸಿದೆ.

ಇದಕ್ಕಾಗಿ ವೇದಿಕೆ ‘ನಮ್ಮ ಮತ–ನಮ್ಮ ನಿರ್ಧಾರ’ ಎಂದು ಚುನಾವಣಾ ಆಂದೋಲನವನ್ನು ಪ್ರಾರಂಭಿಸಿದೆ.

ಎಲ್ಲಾ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಜನಪರ ಸಂಘಟನೆಗಳು ದಶಕಗಳಿಂದ ಚಳವಳಿಗಳನ್ನು ಮಾಡುತ್ತಿವೆ. ಆದರೆ, ಯಾವ ಸರ್ಕಾರವೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವೇದಿಕೆ ದೂರಿದೆ.

‘ಸರ್ಕಾರಿ ಶಾಲೆಗಳು ಉಳಿಯಲಿ-ಬೆಳೆಯಲಿ-ನೆರೆಹೊರೆಯ ಸಮಾನ ಶಾಲೆಗಳಾಗಲಿ ಎಂಬ ಘೋಷ ವಾಕ್ಯದೊಂದಿಗೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ

ಯನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಶಿಕ್ಷಣ ವ್ಯವಸ್ಥೆಯ ಲೋಪಗಳ ಬಗ್ಗೆ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ’ ಎಂದು ವೇದಿಕೆಯ ವಿ.ಪಿ.ನಿರಂಜನಾರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry