ಶುಕ್ರವಾರ, ಡಿಸೆಂಬರ್ 13, 2019
19 °C

ತೈಲ ಬೆಲೆ ಏರಿಕೆ: ಪ್ರಧಾನಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೈಲ ಬೆಲೆ ಏರಿಕೆ: ಪ್ರಧಾನಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರಧಾನಿಯವರು ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಕಾಳಜಿ ವಹಿಸುವರೇ’ ಎಂದು ಪ್ರಶ್ನಿಸಿದ್ದಾರೆ. ಟ್ವೀಟ್‌ ಜತೆಗೆ ವ್ಯಂಗ್ಯಚಿತ್ರವೊಂದನ್ನೂ ಲಗತ್ತಿಸಿದ್ದಾರೆ.

‘2014ಕ್ಕೂ ಮೊದಲು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಇದ್ದಾಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಪ್ರತಿಭಟನೆ ಮಾಡಿತ್ತು. ಈಗ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 68 ಡಾಲರ್‌ಗೆ ಇಳಿಕೆಯಾಗಿದೆ. ಆದರೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚುತ್ತಲೇ ಇರುವುದು ಯಾಕೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಿಕ್ರಿಯಿಸಿ (+)