ಬಿಜೆಪಿಯವರು ಸುಳ್ಳಿನ ಸರದಾರರು: ಸಚಿವ ವಿನಯ ಕುಲಕರ್ಣಿ

7

ಬಿಜೆಪಿಯವರು ಸುಳ್ಳಿನ ಸರದಾರರು: ಸಚಿವ ವಿನಯ ಕುಲಕರ್ಣಿ

Published:
Updated:
ಬಿಜೆಪಿಯವರು ಸುಳ್ಳಿನ ಸರದಾರರು: ಸಚಿವ ವಿನಯ ಕುಲಕರ್ಣಿ

ಹುಬ್ಬಳ್ಳಿ: ಲಿಂಗಾಯತರಿಗೆ ನಲವತ್ತು ಕ್ಷೇತ್ರಗಳಲ್ಲಿ ಟಿಕೆಟ್ ಕೊಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು. 

‘ಬಿಜೆಪಿಯವರು ಸುಳ್ಳಿನ ಸರದಾರರು, ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಯಾರೂ ಧೈರ್ಯ ಮಾಡಿರಲಿಲ್ಲ. ಅದರೆ, ಸಿದ್ದರಾಮಯ್ಯ ಧೈರ್ಯಮಾಡಿ ಕೇಂದ್ರಕ್ಕೆ ಶಿಫಾರಸು ಕಳಿಸಿದ್ದಾರೆ’ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. 

‘ಮುಖ್ಯಮಂತ್ರಿ ಅವರ ಋಣ ಲಿಂಗಾಯತರ ಮೇಲಿದೆ. ಲಿಂಗಾಯತ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ನಮ್ಮ ಸಾಮರ್ಥ್ಯವನ್ನು ತೋರಿಸುತ್ತೇವೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಕೊಟ್ಟಿರುವ ಯೋಜನೆಗಳ ಆಧಾರದ ಮೇಲೆ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲುವ ನಿರೀಕ್ಷೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು. 

ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಬಿಜೆಪಿಯವರು ತಮ್ಮದೆಂದು ಹೇಳಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry