ಚೆಕ್‌ಪೋಸ್ಟ್‌ಗಳಿಗೆ ಭೇಟಿ: ಪರಿಶೀಲನೆ

7

ಚೆಕ್‌ಪೋಸ್ಟ್‌ಗಳಿಗೆ ಭೇಟಿ: ಪರಿಶೀಲನೆ

Published:
Updated:

ಗುಂಡ್ಲುಪೇಟೆ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧೆಡೆ ನಿರ್ಮಾಣವಾಗಿರುವ ಚೆಕ್‌ಪೋಸ್ಟ್‌ಗಳಿಗೆ ಸೋಮವಾರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ, ಗಡಿಭಾಗದಲ್ಲಿರುವ ಕೆಕ್ಕನಹಳ್ಳ ಮತ್ತು ಮೂಲೆಹೊಳೆ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ವೇಳೆ ಮಾತನಾಡಿದ ಬಿ.ಬಿ.ಕಾವೇರಿ, ಚುನಾವಣೆಯಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಅರಣ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದೆ. ರಾಜ್ಯಕ್ಕೆ ಬರುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಯಾಗಲಿ ಎನ್ನುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದರು.ಜಿಲ್ಲೆಯಲ್ಲಿ 19 ಚೆಕ್‌ಪೋಸ್ಟ್‌ಗಳಿದ್ದು, ಎಲ್ಲ ಕಡೆ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಯಾವುದೇ ಅಕ್ರಮಗಳಿಲ್ಲದೆ ಚುನಾವಣೆ ನಡೆಯಲು ಎಲ್ಲರೂ ಸಹಕರಿಸಬೇಕು ಎಂದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಜಯಕುಮಾರ್, ಸಿಪಿಐ ಜಗದೀಶ್ ಹಾಗೂ ಸಿಬ್ಬಂದಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry