‘ರಾಹುಲ್ ಗಾಂಧಿ ಕಾರ್ಯಕ್ರಮ ಯಶಸ್ವಿಗೊಳಿಸಿ’

7

‘ರಾಹುಲ್ ಗಾಂಧಿ ಕಾರ್ಯಕ್ರಮ ಯಶಸ್ವಿಗೊಳಿಸಿ’

Published:
Updated:

ದಾವಣಗೆರೆ: ಏ.3ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗ, ಇಂಟಕ್ ವಿಭಾಗ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, 3ರಂದು ಹೈಸ್ಕೂಲ್‌ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎಂದರು.ಪ್ರಧಾನಮಂತ್ರಿ ನರೇಂದ್ರ ಮೋದಿ ನಾಲ್ಕು ವರ್ಷಗಳ ಆಡಳಿತ ವಿಫಲವಾಗಿದ್ದು, ಸುಳ್ಳು ಹೇಳುವುದೇ ಅವರ ಬಂಡವಾಳವಾಗಿದೆ ಎಂದು ಬಸವರಾಜ ಟೀಕಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ನುಡಿದಂತೆ ನಡೆಯುತ್ತಿದೆ ಎಂದರು.

ಸಭೆಯಲ್ಲಿ ದೇವರಾಜ್ ಸ್ವಾಮಿ, ಆಶ್ರಫ್ ಅಲಿ, ರಹಮತ್‌ ವುಲ್ಲಾ, ಶಫಿ ಅಹ್ಮದ್, ಕೋಳಿ ಇಬ್ರಾಹಿಂ, ಲಿಯಾಖತ್ ಅಲಿ, ಖಾಜಿ ಖಲೀಲ್, ಸಾಧಿಕ್ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry