6
ಚುನಾವಣಾ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ

ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಕಿಲ್ಲ

Published:
Updated:
ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಕಿಲ್ಲ

ಮಂಗಳೂರು: ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯ ಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.ಸೋಮವಾರ ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು.

ಮದುವೆ, ಜನ್ಮದಿನಾಚರಣೆ ಸೇರಿ ದಂತೆ ರಾಜಕೀಯ ಉದ್ದೇಶವಿಲ್ಲದ ಖಾಸಗಿ ಕಾರ್ಯಕ್ರಮಗಳಿಗೆ ಚುನಾ ವಣಾಧಿಕಾರಿಗಳ ಅನುಮತಿ ಪಡೆ ಯಬೇಕಾಗಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯ ಕ್ರಮಗಳಾದರೆ ಧ್ವನಿವರ್ಧಕ ಸೇರಿದಂತೆ ನಿಯಮಾನುಸಾರ ಪಡೆಯಬೇಕಾದ ಅನುಮತಿಗಳನ್ನು ಪಡೆಯಲೇಬೇಕು ಎಂದು ಹೇಳಿದರು.ಯಕ್ಷಗಾನ ಸೇರಿದಂತೆ ರಾಜಕೀಯೇತರ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರು, ಈ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ನಡೆಸುತ್ತಿಲ್ಲ ಎಂದು ಘೋಷಣಾಪತ್ರದೊಂದಿಗೆ ಚುನಾವಣಾಧಿಕಾರಿಗಳಿಗೆ ಅಥವಾ ಸ್ಥಳೀಯ ನಗರ ಸ್ಥಳೀಯ ಸಂಸ್ಥೆ ಅಥವಾ ಗ್ರಾಮ ಪಂಚಾಯಿತಿ ಅಥವಾ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸಾರ್ವಜನಿಕ ಕಾರ್ಯಕ್ರಮಗಳಿಗೆ ತ್ವರಿತವಾಗಿ ಅನುಮತಿ ನೀಡಲು ಸಹ ಕಾರವಾಗುವಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಗವಾಕ್ಷಿ ಕೊಠಡಿ ತೆರೆಯಲಾಗುವುದು. ಸಾರ್ವಜನಿಕರು ಅನುಮತಿ ಕೋರಿ ಜಿಲ್ಲಾಧಿಕಾರಿ ಕಚೇ ರಿಗೆ ಬರಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.ನಗರದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇಗೌಡ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ, ಡಿಸಿಪಿ ಹನುಮಂತರಾಯ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಜೀತ್, ಅಧಿಕಾರಿಗಳು ಭಾಗವಹಿಸಿದ್ದರು

**

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗುವಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಗಮನಹರಿಸಬೇಕು –  ಸಸಿಕಾಂತ್‌ ಸೆಂಥಿಲ್‌,ಜಿಲ್ಲಾಧಿಕಾರಿ.

**

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry