7

ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪಟ್ಟಿ 2018: ಬೆಂಗಳೂರಿನ ಐಐಎಸ್‌ಸಿ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ

Published:
Updated:
ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪಟ್ಟಿ 2018: ಬೆಂಗಳೂರಿನ ಐಐಎಸ್‌ಸಿ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ

ನವದೆಹಲಿ: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸತತ ಮೂರನೇ ವರ್ಷವೂ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಯ ಹಿರಿಮೆ ಉಳಿಸಿಕೊಂಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ.

ಐಐಎಸ್‌ಸಿ ದೇಶದ ಒಟ್ಟಾರೆ ಶಿಕ್ಷಣ ಸಂಸ್ಥೆ ಮತ್ತು ಅತ್ಯುತ್ತಮ ವಿಶ್ವವಿದ್ಯಾಲಯ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಅತ್ಯುತ್ತಮ ಕಾಲೇಜು ರ‍್ಯಾಂಕಿಂಗ್‌ನಲ್ಲಿ  ದೆಹಲಿಯ ಮಿರಂಡ ಹೌಸ್‌ಗೆ ಮೊದಲ ಸ್ಥಾನ. 

ಒಟ್ಟು 3,954 ಶಿಕ್ಷಣ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry