ಆಯ್ಕೆ ಸಮಿತಿ: ಮುಖ್ಯಸ್ಥರಾಗಿ ಆಶಿಶ್ ಕಪೂರ್ ನೇಮಕ

ನವದೆಹಲಿ: ಹಿರಿಯ ಕ್ರಿಕೆಟಿಗ ಆಶಿಶ್ ಕಪೂರ್ ಅವರನ್ನು ಭಾರತ ಜೂನಿಯರ್ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರನ್ನಾಗಿ ಬಿಸಿಸಿಐ ನೇಮಕ ಮಾಡಿದೆ.
ವೆಂಕಟೇಶ್ ಪ್ರಸಾದ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಆಶಿಶ್ ನೇಮಕವಾಗಿದ್ದಾರೆ.
ಪ್ರಸಾದ್ ಅವರು ಈಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿದ್ದಾರೆ.
ಪ್ರತಿಕ್ರಿಯಿಸಿ (+)