ಸ್ವರಾಜ್‌ ಇಂಡಿಯಾ ಪಕ್ಷದಿಂದ ದರ್ಶನ್‌ ಪುಟ್ಟಣ್ಣಯ್ಯ ಸ್ಪರ್ಧೆ

7

ಸ್ವರಾಜ್‌ ಇಂಡಿಯಾ ಪಕ್ಷದಿಂದ ದರ್ಶನ್‌ ಪುಟ್ಟಣ್ಣಯ್ಯ ಸ್ಪರ್ಧೆ

Published:
Updated:

ಬೆಂಗಳೂರು: ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ದರ್ಶನ್ ಪುಟ್ಟಣ್ಣಯ್ಯ ಕಣಕ್ಕೆ ಇಳಿಯಲಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಯಾದಗಿರಿ ಕ್ಷೇತ್ರದಿಂದ ವೈಜನಾಥ ಪಾಟೀಲ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದಿಂದ ಎಚ್‌.ಎಸ್‌.ಲಿಂಗೇಗೌಡ, ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ರಮೇಶ್‌ ಚಂದ್ರ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಿಂದ ಕೆ.ಪಿ.ಭೂತಯ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಶೈಲೇಂದ್ರ (ಶ್ರೀಕಂಠಸ್ವಾಮಿ) ಸ್ಪರ್ಧಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry