ಶುಕ್ರವಾರ, ಡಿಸೆಂಬರ್ 6, 2019
25 °C

ಶಾಸಕ ಮಲ್ಲಿಕಾರ್ಜುನ ಖೂಬಾ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಮಲ್ಲಿಕಾರ್ಜುನ ಖೂಬಾ ರಾಜೀನಾಮೆ

ರಾಣೆಬೆನ್ನೂರು: ಬೀದರ್‌ ಜಿಲ್ಲೆಯ ಬಸವಕಲ್ಯಾಣ ವಿಧಾಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಮಂಗಳವಾರ ತಮ್ಮ ಸ್ಥಾನಕ್ಕೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.

ನಗರದಲ್ಲಿರುವ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಅವರು, ತಮ್ಮ ಮುಂದಿನ ನಡೆಯನ್ನು ಬುಧವಾರ ಪ್ರಕಟಿಸುವುದಾಗಿ ಹೇಳಿದರು.

‘ಬಿಜೆಪಿ ಸೇರುವ ವಿಷಯವಾಗಿ ತಮ್ಮ ಕ್ಷೇತ್ರದಲ್ಲಿ ಯಾರೂ ವಿರೋಧ ಮಾಡಿಲ್ಲ. ವಿರೋಧ ಮಾಡಿ, ಬಸವಕಲ್ಯಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದವರು ಕಾಂಗ್ರೆಸ್‌ ಏಜೆಂಟರು’ ಎಂದು ಖೂಬಾ ಆಪಾದಿಸಿದರು.

ಪ್ರತಿಕ್ರಿಯಿಸಿ (+)