ಶುಕ್ರವಾರ, ಡಿಸೆಂಬರ್ 6, 2019
19 °C

ಗೋಲ್ಡ್‌ ಕೋಸ್ಟ್‌ನಲ್ಲಿ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಇಂದು ಚಾಲನೆ

Published:
Updated:
ಗೋಲ್ಡ್‌ ಕೋಸ್ಟ್‌ನಲ್ಲಿ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಇಂದು ಚಾಲನೆ

ಗೋಲ್ಡ್‌ ಕೋಸ್ಟ್ (ಎಎಫ್‌ಪಿ): ಕಡಲ ಕಿನಾರೆಯ ಸುಂದರ ನಗರಿ ಗೋಲ್ಡ್‌ ಕೋಸ್ಟ್‌ನಲ್ಲಿ ಬುಧವಾರ 21ನೇ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ರಂಗುರಂಗಿನ ಚಾಲನೆ ದೊರೆಯಲಿದೆ.

71 ರಾಷ್ಟ್ರಗಳ 6,600 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಭಾರತದ 221 ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಆರಂಭವಾಗಲಿರುವ ಉದ್ಘಾಟನೆ ಕಾರ್ಯಕ್ರಮದ ಪಥಸಂಚಲನದಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

2010ರಲ್ಲಿ ಭಾರತದಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕೂಟದಲ್ಲಿ ಭಾರತ ತಂಡವು 101 ಪದಕಗಳನ್ನು ಗೆದ್ದಿತು. 2014ರಲ್ಲಿ ಗ್ಲಾಸ್ಗೊದಲ್ಲಿ ನಡೆದಿದ್ದ ಕೂಟದಲ್ಲಿ 64 ಪದಕಗಳನ್ನು ಜಯಿಸಿತ್ತು.

ಈ ಸಲ ಬ್ಯಾಡ್ಮಿಂಟನ್‌ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್, ಮಹಿಳೆಯರ ವಿಭಾಗದಲ್ಲಿ ಸಿಂಧು, ಸೈನಾ ನೆಹ್ವಾಲ್, ಕುಸ್ತಿಯಲ್ಲಿ ಸುಶೀಲ್‌ ಕುಮಾರ್, ಸಾಕ್ಷಿ ಮಲಿಕ್,  ವಿನೇಶಾ ಪೋಗಟ್, ಮಹಿಳೆಯರ ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು, ಅಥ್ಲೆಟಿಕ್ಸ್‌ನಲ್ಲಿ  ಜಾವೆಲಿನ್ ಪಟು ನೀರಜ್ ಚೋಪ್ರಾ, ಕರ್ನಾಟಕದ ಎಂ.ಆರ್‌.ಪೂವಮ್ಮ, ಬಾಕ್ಸಿಂಗ್‌ನಲ್ಲಿ ಮೇರಿ ಕೋಮ್, ಸರಿತಾದೇವಿ, ವಿಕಾಸ್ ಕೃಷ್ಣನ್, ಅಮಿತ್ ಪಂಗಲ್, ಜಿಮ್ನಾಸ್ಟಿಕ್ಸ್‌ನಲ್ಲಿ ಅರುಣಾ ಬುದ್ಧಾರೆಡ್ಡಿ ಅವರು ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಡಿಸ್ಕಸ್‌ ಥ್ರೋ ಸ್ಪರ್ಧಿ ವಿಕಾಸ್‌ ಗೌಡ, ಜಿಮ್ನಾಸ್ಟ್‌ ದೀಪಾ ಕರ್ಮಾಕರ್ ಅವರು ಗಾಯದಿಂದಾಗಿ ಈ ಬಾರಿ ಕಣಕ್ಕಿಳಿಯುತ್ತಿಲ್ಲ.

ಪ್ರತಿಕ್ರಿಯಿಸಿ (+)