ಮಂಗಳವಾರ, ಏಪ್ರಿಲ್ 20, 2021
27 °C

ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ: ಸುಪ್ರೀಂ ಕೋರ್ಟ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂವಿಧಾನದ 370ನೇ ವಿಧಿಯನ್ನು ತಾತ್ಕಾಲಿಕ ಎಂದು ಘೋಷಿಸಬೇಕು ಎಂಬ ಮನವಿಯನ್ನು 2017ರ ಏಪ್ರಿಲ್ 11ರಂದು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಝಾ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

‘ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ ಎಂದು 2017ರಲ್ಲಿ ನೀಡಿದ್ದ ತೀರ್ಪಿನಲ್ಲೇ ಹೇಳಲಾಗಿದೆ’ ಎಂದು ನ್ಯಾಯಮೂರ್ತಿ ಎ.ಕೆ. ಗೋಯಲ್ ಮತ್ತು ಆರ್‌.ಎಫ್‌. ನಾರಿಮನ್ ಅವರಿದ್ದ ನ್ಯಾಯಪೀಠ ಹೇಳಿತು.

ಕೇಂದ್ರ ಸರ್ಕಾರದ ಪರ ಅಭಿಪ್ರಾಯ ವ್ಯಕ್ತಪಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇಂತಹ ಕೆಲವು ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಅವುಗಳನ್ನು ಪಟ್ಟಿ ಮಾಡಿ ಸಲ್ಲಿಸಲಾಗುವುದು. ಹೀಗಾಗಿ ಕೆಲವು ಸಮಯದ ನಂತರ ಈ ಪ್ರಕರಣದ ವಿಚಾರಣೆ ನಡೆಸಲಾಗುವುದು’ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರವನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರಾದ ರಾಜೀವ್ ಧವನ್ ಮತ್ತು ಶೋಯೆಬ್ ಅಲಂ ಸ್ಪಷ್ಟನೆ ನೀಡಿ, 370ನೇ ವಿಧಿಯ 35ಎ ಕಲಂಗೆ ಸಂಬಂಧಿಸಿದ ವಿಷಯಗಳ ವಿಚಾರಣೆ ಬಾಕಿ ಇದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.