ಗುರುವಾರ , ಫೆಬ್ರವರಿ 20, 2020
30 °C

ದಾವಣಗೆರೆ ಬೆಣ್ಣೆ ದೋಸೆ ಸವಿದು ಚಿತ್ರದುರ್ಗಕ್ಕೆ ತೆರಳಿದ ರಾಹುಲ್ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ ಬೆಣ್ಣೆ ದೋಸೆ ಸವಿದು ಚಿತ್ರದುರ್ಗಕ್ಕೆ ತೆರಳಿದ ರಾಹುಲ್ ಗಾಂಧಿ

ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಪಿಜೆ ಬಡಾವಣೆಯಲ್ಲಿರುವ ವಿಜಿ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಬೆಣ್ಣೆ ದೋಸೆ ಸವಿದರು.

ಬೆಣ್ಣೆದೋಸೆ ರುಚಿಗೆ ಮನಸೋತ ಅವರು ಹೋಟೆಲ್ ಮಾಲೀಕನಿಗೆ ಮೆಚ್ಚುಗೆ ತಿಳಿಸಿದರು. ಬಳಿಕ ಪಕ್ಕದಲ್ಲಿರುವ ಪದ್ದು ಕಾಫಿ ಬಾರ್‌ನಿಂದ ಚಹಾ ತರಿಸಿಕೊಂಡು ಕುಡಿದರು. ನಂತರ ಅಭಿಮಾನಿಗಳಿಗೆ ಹಸ್ತಲಾಘವ ಮಾಡಿ ಚಿತ್ರದುರ್ಗಕ್ಕೆ ತೆರಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕೂಡ ಬೆಣ್ಣೆ ದೋಸೆ ತಿಂದರು.

ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರು ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಗುಪ್ತ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದರು.

(ಚಹಾ ಕುಡಿಯುತ್ತ ಹೋಟೆಲ್ ಸಿಬ್ಬಂದಿ ಜತೆ ಫೋಟೊ ತೆಗೆಸಿಕೊಂಡ ರಾಹುಲ್ ಗಾಂಧಿ)

ಇನ್ನಷ್ಟು...

ದಾವಣಗೆರೆ: ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)