ಶುಕ್ರವಾರ, ಡಿಸೆಂಬರ್ 13, 2019
19 °C

​ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಬಿಜೆಪಿಗೆ ಚುನಾವಣಾ ವಿಷಯ: ಕಾಂಗ್ರೆಸ್‌ ಆರೋಪ​

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

​ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಬಿಜೆಪಿಗೆ ಚುನಾವಣಾ ವಿಷಯ: ಕಾಂಗ್ರೆಸ್‌ ಆರೋಪ​

ಬೆಳಗಾವಿ: ‘ಲಿಂಗಾಯತ ಧರ್ಮದ ವಿಷಯವು ಬಿಜೆಪಿಗೆ ಚುನಾವಣಾ ವಿಷಯವಾಗಿದೆ ಹೊರತು, ಕಾಂಗ್ರೆಸ್‌ಗೆ ಅಲ್ಲ. ನಾವು ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ’ ಎಂದು ಎಐಸಿಸಿ ಕಾರ್ಯದರ್ಶಿ ಮಾಣಿಕ್ಕಂ ಠಾಕೂರ್‌ ಹೇಳಿದರು.

ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆನ್ನುವುದು ಆ ಸಮುದಾಯದವರ ಹಲವು ದಶಕಗಳ ಬೇಡಿಕೆಯಾಗಿತ್ತು. ಅವರ ಬೇಡಿಕೆಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆಯೇ ಹೊರತು, ಧರ್ಮ ಒಡೆಯುವ ಕೆಲಸವನ್ನು ಕಾಂಗ್ರೆಸ್‌ ಮಾಡಿಲ್ಲ ಎಂದು ಅವರು ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೋಮುವಾದ ಕೆರಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ, ರಾಜ್ಯದ ಜನರು ಶಾಂತಿ ಸಹಬಾಳ್ವೆ ಬಯಸುತ್ತಿದ್ದಾರೆ. ನಮ್ಮ ಪಕ್ಷದ ಧ್ಯೇಯ ಕೂಡ ಇದೆ ಆಗಿದೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)