ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.5ರಂದು ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತ

Last Updated 4 ಏಪ್ರಿಲ್ 2018, 10:37 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ(ಏ.5) ತಮಿಳುನಾಡು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ರಾಜ್ಯದಿಂದ ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಕಾವೇರಿ ನಿರ್ವಹಣಾ ಮಂಡಳಿ (ಸಿಎಂಬಿ) ರಚಿಸಲು ಕೇಂದ್ರ ಸರ್ಕಾರ ವಿಫಲವಾಗಿರುವುದನ್ನು ವಿರೋಧಿಸಿ ಏಪ್ರಿಲ್ 5ರಂದು ರಾಜ್ಯವ್ಯಾಪಿ ಬಂದ್ ಆಚರಿಸುವಂತೆ ಡಿಎಂಕೆ ನೇತೃತ್ವದಲ್ಲಿ ವಿರೋಧ ಪಕ್ಷಗಳು ಕರೆ ನೀಡಿವೆ.

ಗುರುವಾರ ಬೆಳಿಗ್ಗೆಯಿಂದ ಸಂಜೆ ವರೆಗೂ ಕರ್ನಾಟಕದಿಂದ ತಮಿಳುನಾಡಿನ ಯಾವುದೇ ಭಾಗಕ್ಕೂ ಕೆಸ್‌ಆರ್‌ಟಿಸಿ ಬಸ್‌ ಸಂಚಾರ ಇರುವುದಿಲ್ಲ. ರಾತ್ರಿ ಬಸ್‌ ಸೇವೆ ಎಂದಿನಂತೆ ಇರಲಿದೆ.

ಆರು ವಾರಗಳಲ್ಲಿ ಸಿಎಂಬಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಫೆ.16ರಂದು ಆದೇಶ ನೀಡಿತ್ತು. ಈ ಅವಧಿ ಮಾರ್ಚ್ 29ಕ್ಕೆ ಅಂತ್ಯವಾಗಿದ್ದು, ಆದೇಶಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರ ಮಾರ್ಚ್‌ 31ರಂದು ಸುಪ್ರೀಂ ಮೆಟ್ಟಿಲೇರಿತ್ತು. 

ಸುಪ್ರೀಂ ಆದೇಶದಲ್ಲಿ, ಕಾವೇರಿ ನದಿ ನೀರು ಹಂಚಿಕೆಯಲ್ಲಿ 270 ಟಿಎಂಸಿ ಇದ್ದ ಕರ್ನಾಟಕದ ಪಾಲನ್ನು 14.75 ಟಿಎಂಸಿ ಅಷ್ಟು ಹೆಚ್ಚಿಸಲಾಗಿದೆ. ಇದರಿಂದ ಕಾವೇರಿ ಜಲ ವಿವಾದ ನ್ಯಾಯಮಂಡಳಿ ನೀಡಿದ್ದ ತೀರ್ಪು ಪರಿಷ್ಕರಣೆಯಾಗಿದೆ. ಸಿಎಂಬಿ ರಚಿಸುವವರೆಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ಡಿಎಂಕೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT