ಸಮಾರಂಭಕ್ಕೆ ಮುನ್ನ ಅನುಮತಿ ಕಡ್ಡಾಯ

7

ಸಮಾರಂಭಕ್ಕೆ ಮುನ್ನ ಅನುಮತಿ ಕಡ್ಡಾಯ

Published:
Updated:

 

ಚಿಂತಾಮಣಿ: ಸಭೆ, ಸಮಾರಂಭ ನಡೆಸಬೇಕಾದರೆ ಕಡ್ಡಾಯವಾಗಿ ಚುನಾವಣಾಧಿಕಾರಿಯ ಅನುಮತಿ ಪಡೆಯಬೇಕು ಎಂದು ಚುನಾವಣಾ ಧಿಕಾರಿ ಸವಿತಾ ತಿಳಿಸಿದರು.ನಗರಸಭೆಯ ಸಭಾಂಗಣದಲ್ಲಿ ತಾಲ್ಲೂಕು ಚುನಾವಣಾಧಿಕಾರಿಗಳ ವತಿ ಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮತದಾನ ಯಂತ್ರಗಳ ಬಳಕೆ ತರಬೇತಿ ಶಿಬಿರದಲ್ಲಿ ಮಾತನಾಡಿದರು.ಸಭೆ ಸಮಾರಂಭಗಳನ್ನು ಆಯೋಜನೆ ಮಾಡುವ 48 ಗಂಟೆಗಳ ಒಳಗಾಗಿ ಅನುಮತಿ ಪಡೆದು ಕಾರ್ಯಕ್ರಮ ನಡೆಸಬೇಕು. ಅನುಮತಿ ಪಡೆಯದೆ ಕಾರ್ಯಕ್ರಮ ಮಾಡಿದರೆ ಅಭ್ಯರ್ಥಿಯ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ವಿಧಾನಸಭಾ ಚುನಾವಣೆಯನ್ನು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಭಾರತ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ.ಯಾವುದೇ ಪಕ್ಷದ ಮುಖಂಡರು ಚುನಾವಣಾ ನೀತಿ ಸಂಹಿತೆ ಜಾರಿಯಾದ ಕೂಡಲೇ ಸಭೆ ಸಮಾರಂಭಗಳನ್ನು ನಡೆಸಲು ಕಾನೂನು ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ಸೂಚಿಸಿದರು.ರಾಜ್ಯ ಚುನಾವಣಾ ಮತಯಂತ್ರಗಳ ತರಬೇತಿದಾರ ಡಾ.ಎಂ.ಎನ್‌.ರಘು ರಾಜಕೀಯ ಪಕ್ಷಗಳ ಮುಖಂಡರಿಗೆ ಹಾಗೂ ಅಧಿಕಾರಿಗಳಿಗೆ ವಿವಿ ಪ್ಯಾಟ್‌ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸಲಿವೆ ಎಂದು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.

ತಹಶೀಲ್ದಾರ್‌ ವಿಶ್ವನಾಥ್‌, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಶ್ರೀನಿವಾಸ್‌, ಪೌರಾಯುಕ್ತ ಪ್ರಸಾದ್‌, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗೇಂದ್ರಬಾಬು, ವಿವಿಧ ಹಂತಗಳ ಚುನಾವಣಾ ಸಿಬ್ಬಂದಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry