ಶುಕ್ರವಾರ, ಡಿಸೆಂಬರ್ 13, 2019
19 °C

ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ವರ್ಣರಂಜಿತ ಚಾಲನೆ: ತ್ರಿವರ್ಣ ಧ್ವಜ ಹಿಡಿದು ತಂಡ ಮುನ್ನಡೆಸಿದ ಸಿಂಧು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ವರ್ಣರಂಜಿತ ಚಾಲನೆ: ತ್ರಿವರ್ಣ ಧ್ವಜ ಹಿಡಿದು ತಂಡ ಮುನ್ನಡೆಸಿದ ಸಿಂಧು

ಗೋಲ್ಡ್‌ ಕೋಸ್ಟ್: ಇಲ್ಲಿನ ಕರಾರ ಕ್ರೀಡಾಂಗಣದಲ್ಲಿ 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ವರ್ಣರಂಜಿತ ಚಾಲನೆ ದೊರೆಯಿತು. ಈ ವೇಳೆ ಒಲಿಂಪಿಕ್‌ ಬೆಳ್ಳಿ ಪದಕ ವಿಜೇತ ಕ್ರೀಡಾಪಟು ಪಿವಿ ಸಿಂಧು ಅವರು ತ್ರಿವರ್ಣ ದ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಿದರು.

ಗ್ಲಾಸ್ಗೊದಲ್ಲಿ ನಡೆದಿದ್ದ ಕಳೆದ ಬಾರಿಯ ಕ್ರೀಡಾಕೂಟದಲ್ಲಿ 15 ಚಿನ್ನ, 30 ಬೆಳ್ಳಿ ಹಾಗೂ 19 ಕಂಚಿನ ಪದಕದೊಂದಿಗೆ ಒಟ್ಟು 64 ಪದಕಗಳನ್ನು ಭಾರತ ತಂಡ ಗೆದ್ದುಕೊಂಡಿತ್ತು. ಈ ಬಾರಿ ಪದಕಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಭರವಸೆಯಲ್ಲಿದೆ ಭಾರತ ತಂಡ.

(ಎಪಿ ಚಿತ್ರ)

ಈ ಬಾರಿ 71 ರಾಷ್ಟ್ರಗಳ 6,600 ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಭಾರತದ 221 ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

ಪ್ರತಿಕ್ರಿಯಿಸಿ (+)