ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ವಿರುದ್ಧ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

Last Updated 4 ಏಪ್ರಿಲ್ 2018, 13:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಬಿಜೆಪಿಯವರು ಈ ಹಿಂದೆ ತಮ್ಮ ಆಡಳಿತಾವಧಿಯಲ್ಲಿ ಮಾಡಬಾರದ್ದನ್ನೆಲ್ಲ ಮಾಡಿ ಮನೆಗೆ ಹೋಗಿದ್ದಾರೆ. ಇದೀಗ ವಿಧಾನಸಭೆ ಚುನಾವಣೆಯಲ್ಲಿ ಅವರು 150 ಸ್ಥಾನಗಳನ್ನು ಗೆಲ್ಲುವುದಕ್ಕೆ ಏನು ಕಡಿದು ಕಟ್ಟೆ ಹಾಕಿದ್ದಾರೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದರು. 

ಏ.7ರಂದು ನಿಗದಿಯಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಗರ ಭೇಟಿ ಪೂರ್ವಭಾವಿ ಸಿದ್ಧತೆ ಪರಿಶೀಲನೆಗೆ ಬುಧವಾರ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಿಜೆಪಿಯಲ್ಲಿ ಐದು ವರ್ಷಗಳ ಆಡಳಿತದಲ್ಲಿ ಮೂರು ಮುಖ್ಯಮಂತ್ರಿಗಳಾದರು. ಅನೇಕ ಸಚಿವರು, ಶಾಸಕರು ಜೈಲಿಗೆ ಹೋಗಿ ಬಂದರು. ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ. ಗಣಿ ಧೂಳು ಎಬ್ಬಿಸಿದ್ದೇ ಅವರ ಸಾಧನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸರ್ಕಾರದಲ್ಲಿರುವ ಅನೇಕರು ಗೋ ಹತ್ಯೆ ನಿಷೇಧದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಗೋವುಗಳ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಷೇಧಿಸಲಿ. ಗೋವು ಮಾತ್ರವಲ್ಲ ಎಲ್ಲ ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಲಿ ನೋಡೋಣ. ಬಿಜೆಪಿಯವರು ಒಂದು ರೀತಿ ಗೋಸುಂಬೆ ತರದವರು’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT