ಶುಕ್ರವಾರ, ಡಿಸೆಂಬರ್ 6, 2019
26 °C

ಐಸಿಸಿ ರ‍್ಯಾಂಕಿಂಗ್‌: ಎರಡನೇ ಸ್ಥಾನದಲ್ಲಿಯೇ ಉಳಿದ ವಿರಾಟ್‌ ಕೊಹ್ಲಿ

Published:
Updated:
ಐಸಿಸಿ ರ‍್ಯಾಂಕಿಂಗ್‌: ಎರಡನೇ ಸ್ಥಾನದಲ್ಲಿಯೇ ಉಳಿದ ವಿರಾಟ್‌ ಕೊಹ್ಲಿ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ವಿಶ್ವಕ್ರಮಾಂಕ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಕೊಹ್ಲಿ ಒಟ್ಟು 912 ಪಾಯಿಂಟ್ಸ್‌ ಹೊಂದಿದ್ದು, ಚೆಂಡು ವಿರೂಪ ಪ್ರಕರಣದಿಂದ ಇತ್ತೀಚೆಗೆ ಒಂದು ವರ್ಷದ ನಿಷೇಧ ಶಿಕ್ಷೆಗೊಳಗಾಗಿರುವ ಸ್ಮಿತ್  ಕೊಹ್ಲಿಗಿಂತ ಹೆಚ್ಚುವರಿ 17 ಪಾಯಿಂಟ್ಸ್‌ ಹೊಂದಿದ್ದಾರೆ. ಏಳನೇ ಸ್ಥಾನದಲ್ಲಿರುವ ಚೇತೇಶ್ವರ ಪೂಜಾರ ಒಟ್ಟು 810 ಪಾಯಿಂಟ್ಸ್‌ ಹೊಂದಿದ್ದಾರೆ.

ಆಲ್‌ರೌಂಡರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. 803 ಪಾಯಿಂಟ್ಸ್‌ ಗಳಿಸಿರುವ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಐದನೇ ಸ್ಥಾನಕ್ಕೆ ಇಳಿದಿದ್ದಾರೆ.

ಪ್ರತಿಕ್ರಿಯಿಸಿ (+)