ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಸ್ಟ್‌ ಇಂಡೀಸ್‌ ವಿರುದ್ಧದ ಟ್ವೆಂಟಿ–20: ಪಾಕಿಸ್ತಾನ ‘ಕ್ಲೀನ್‌ ಸ್ವೀಪ್‌’ ಸಾಧನೆ

Last Updated 4 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಕರಾಚಿ (ಎಎಫ್‌ಪಿ): ಬಾಬರ್‌ ಆಜಮ್‌ (51; 40ಎ) ಹಾಗೂ ಆರಂಭಿಕ ಬ್ಯಾಟ್ಸ್‌ಮನ್‌ ಫಕ್ರ್ ಜಮಾನ್‌ ಅವರ ಬಿರುಸಿನ ಬ್ಯಾಟಿಂಗ್‌ (40; 17ಎ, 2 ಸಿಕ್ಸರ್‌, 6 ಬೌಂಡರಿ) ನೆರವಿನಿಂದ ಪಾಕಿಸ್ತಾನ ತಂಡವು ವೆಸ್ಟ್‌ ಇಂಡೀಸ್‌ ವಿರುದ್ಧದ ಮೂರನೇ ಟ್ವೆಂಟಿ–20 ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಗೆದ್ದಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದೆ.

ಮೊದಲಿಗೆ ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌, 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ಎದುರಾಳಿ ತಂಡಕ್ಕೆ 153 ರನ್‌ಗಳ ಸವಾಲು ನೀಡಿತು. 43 ಎಸೆತಗಳಲ್ಲಿ 52 ರನ್‌ ಗಳಿಸಿದ ಆ್ಯಂಡ್ರ್ಯೂ ಫ್ಲೆಚರ್‌, ವೆಸ್ಟ್‌ ಇಂಡೀಸ್‌ ಪರ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎಂದೆನಿಸಿಕೊಂಡರು.

ವೇಗದ ಆಟವಾಡಿದ ದಿನೇಶ್‌ ರಾಮ್‌ದಿನ್‌ ಅವರು 18 ಎಸೆತಗಳಲ್ಲಿ 42 ರನ್‌ (3 ಸಿ, 4 ಬೌಂ) ಗಳಿಸಿ ತಂಡದ ಮೊತ್ತ ಹೆಚ್ಚಲು ಕಾರಣರಾದರು.

ಗುರಿ ಬೆನ್ನಟ್ಟಿದ ಆತಿಥೇಯ ತಂಡವು, ಕೇವಲ 16.5 ಓವರ್‌ಗಳಲ್ಲಿ ಜಯ ತಲುಪಿತು.

ಈ ಮೂಲಕ ಪಾಕಿಸ್ತಾನವು ಐಸಿಸಿ ಟ್ವೆಂಟಿ–20 ಅಂತರರಾಷ್ಟ್ರೀಯ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT