ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಸೇರ್ಪಡೆ: ಸಂಭ್ರಮಾಚರಣೆ

7

ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಸೇರ್ಪಡೆ: ಸಂಭ್ರಮಾಚರಣೆ

Published:
Updated:
ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಸೇರ್ಪಡೆ: ಸಂಭ್ರಮಾಚರಣೆ

 

ಬಸವಕಲ್ಯಾಣ: ನಿನ್ನೆಯಷ್ಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಲ್ಲಿಕಾರ್ಜುನ ಖೂಬಾ ಬುಧವಾರ ಜೆಡಿಎಸ್ ತೊರೆದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ಇಲ್ಲಿ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನೂರಾರು ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಗೊಂಡರು.ಇಲ್ಲಿನ ಡಾ.ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಶರಣ ಹರಳಯ್ಯ ವೃತ್ತ, ತ್ರಿಪುರಾಂತದ ಮಡಿವಾಳ ಮಾಚಿದೇವರ ವೃತ್ತದಲ್ಲಿ ಖೂಬಾ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry