ಕಲ್ಲಿದ್ದಲು ಸ್ಫೋಟ: ಇಬ್ಬರು ಸಿಆರ್‌ಪಿಎಫ್‌ ಯೋಧರು ಸಾವು

7

ಕಲ್ಲಿದ್ದಲು ಸ್ಫೋಟ: ಇಬ್ಬರು ಸಿಆರ್‌ಪಿಎಫ್‌ ಯೋಧರು ಸಾವು

Published:
Updated:
ಕಲ್ಲಿದ್ದಲು ಸ್ಫೋಟ: ಇಬ್ಬರು ಸಿಆರ್‌ಪಿಎಫ್‌ ಯೋಧರು ಸಾವು

ಶ್ರೀನಗರ: ಜಮ್ಮು– ಕಾಶ್ಮೀರದ ಅನಾಂತ್‌ನಾಗ್‌ ಜಿಲ್ಲೆಯಲ್ಲಿ ಸಂಭವಿಸಿದ ಕಲ್ಲಿದ್ದಲು ಸ್ಫೋಟದ ವೇಳೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಇಬ್ಬರು ಯೋಧರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ ಮೂವರು ಯೋಧರು ಹಾಗೂ ಒಬ್ಬ ಭದ್ರತಾ ಸಿಬ್ಬಂದಿ ಕೋಕರ್ನಾಗ್ ಪ್ರದೇಶದಲ್ಲಿರುವ ಹಿಲ್ಲರ್‌ ಗ್ರಾಮದ ಮೂಲಕ ಹಾದುಹೋಗುತ್ತಿದ್ದ ವೇಳೆ ಕಲ್ಲಿದ್ದಲು ಸ್ಫೋಟ ಸಂಭವಿಸಿದೆ. ಸ್ಪೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿದ್ದು, ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಗಾಯಗೊಂಡಿದ್ದ ಮತ್ತೊಬ್ಬ ಯೋಧ ಹಾಗೂ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry