ಸೋಮವಾರ, ಆಗಸ್ಟ್ 10, 2020
26 °C

ಚುನಾವಣಾ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ: ಎಚ್.ಡಿ.ರೇವಣ್ಣ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚುನಾವಣಾ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ: ಎಚ್.ಡಿ.ರೇವಣ್ಣ ಆರೋಪ

ಹಾಸನ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.

ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ‌ ಆಯೋಜನೆ ಮಾಡುತ್ತಿದ್ದು,  ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ‌ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.

‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್‌ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್‌ನೊಂದಿಗೆ ಶಾಮೀಲಾಗಿದೆ’ ಎಂದು ಆರೋಪಿಸಿದರು.

ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.

‘ನಮ್ಮ‌ ಪಕ್ಷದ‌ ಸಮಾವೇಶಕ್ಕೆ ಸಾರಿಗೆ ಬಸ್ಸುಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್ಸುಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.

‘ಕಾಂಗ್ರೆಸ್‌ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೇ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.

ಕೆಲವೆಡೆ ಪೊಲೀಸ್‌ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ‌ ನಡೆದಿದ್ದು, ಈ ಬಗ್ಗೆ‌ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.