ಜನೋಪಕಾರಿ ಕಾರ್ಯಗಳನ್ನು ಮಾಡಿರುವ ಸಲ್ಮಾನ್‌ಗೆ ಬಿಡುಗಡೆ ನೀಡಬೇಕು: ಜಯಾ ಬಚ್ಚನ್‌

ಭಾನುವಾರ, ಮಾರ್ಚ್ 24, 2019
31 °C

ಜನೋಪಕಾರಿ ಕಾರ್ಯಗಳನ್ನು ಮಾಡಿರುವ ಸಲ್ಮಾನ್‌ಗೆ ಬಿಡುಗಡೆ ನೀಡಬೇಕು: ಜಯಾ ಬಚ್ಚನ್‌

Published:
Updated:
ಜನೋಪಕಾರಿ ಕಾರ್ಯಗಳನ್ನು ಮಾಡಿರುವ ಸಲ್ಮಾನ್‌ಗೆ ಬಿಡುಗಡೆ ನೀಡಬೇಕು: ಜಯಾ ಬಚ್ಚನ್‌

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌(52)ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ಪ್ರಕಟಿಸಿದ್ದು, ತೀರ್ಪಿನ ಕುರಿತು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷ ಹಿಂದಿನ ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಸಲ್ಮಾನ್‌ಖಾನ್‌ಗೆ ಗುರುವಾರ ಶಿಕ್ಷೆ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಇದು ಬೇಸರದ ಸಂಗತಿ. ಅವರು ಅನೇಕ ಜನೋಪಕಾರಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಬಿಡುಗಡೆ ನೀಡಬೇಕು’ ಎಂದಿದ್ದಾರೆ.

ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ 5 ವರ್ಷ ಜೈಲು ಹಾಗೂ ₹10 ಸಾವಿರ ದಂಡ ವಿಧಿಸಿತ್ತು. ಸಹ ಆರೋಪಿಗಳಾಗಿದ್ದ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಹಾಗೂ ಸ್ಥಳೀಯ ವ್ಯಕ್ತಿ ದುಷ್ಯಂತ್‌ ಸಿಂಗ್‌ ಅವರನ್ನು ಖುಲಾಸೆಗೊಳಿಸಲಾಗಿದೆ.
ಏ.6ರಂದು ಬೆಳಿಗ್ಗೆ 10:30ಕ್ಕೆ ಸೆಷನ್ಸ್‌ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.

1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್​ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು. ಈ ಸಂಬಂಧ ಮೂರು ಪ್ರಕರಣ ದಾಖಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry