ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಕಡ್ಡಾಯ

2020–21ರ ಶೈಕ್ಷಣಿಕ ವರ್ಷದಿಂದ ಅನ್ವಯ
Last Updated 5 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ : ಎಲ್ಲ ವೈದ್ಯಕೀಯ ಕಾಲೇಜುಗಳೂ 2020–21ನೇ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸ್ನಾತಕೋತ್ತರ ಪದವಿಗಳನ್ನು ಆರಂಭಿಸುವುದು ಕಡ್ಡಾಯವಾಗಲಿದೆ. ವಿಫಲವಾದಲ್ಲಿ ಕಾಲೇಜಿನ ಮಾನ್ಯತೆ ರದ್ದಾಗಲಿದೆ.

ಭಾರತೀಯ ವೈದ್ಯಕೀಯ ಮಂಡಳಿಯ (ಎಂಸಿಐ) ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣ ನಿಯಂತ್ರಣ 2000 ನಿಯಮಾವಳಿಗಳಿಗೆ ತಿದ್ದುಪಡಿ ತರಲಾಗಿದ್ದು, ಇದಕ್ಕೆ ಸಚಿವಾಲಯ ಅನುಮೋದನೆ ನೀಡಿದೆ. ಇದರ ಅನುಸಾರ ಶೀಘ್ರವೇ ಈ ನೂತನ ನಿಯಮಗಳು ಜಾರಿಗೆ ಬರಲಿವೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ದೇಶದಲ್ಲಿ ವೈದ್ಯರ ಕೊರತೆ ನೀಗಿಸುವುದು ಇದರ ಉದ್ದೇಶ. ನೂತನ ನಿಯಮಗಳು ಜಾರಿಗೆ ಬಂದ ಬಳಿಕ, ಮುಂದಿನ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ 10 ಸಾವಿರ ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯವಾಗಲಿವೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ನೂತನ ವೈದ್ಯಕೀಯ ಕಾಲೇಜುಗಳಿಗೂ ಈ ನಿಯಮಗಳು ಅನ್ವಯವಾಗಲಿವೆ. ‍ಪದವಿಪೂರ್ವ ಕೋರ್ಸ್‌ಗಳನ್ನು ಆರಂಭಿಸಲು ಮಾನ್ಯತೆ ದೊರಕಿದ ಮೂರು ವರ್ಷಗಳ ಒಳಗಾಗಿ ಸ್ನಾತಕೋತ್ತರ ಪದವಿಗಳನ್ನು ಸಹ  ಆರಂಭಿಸಬೇಕಾಗುತ್ತದೆ.

ಹೊಸದಾಗಿ ಸ್ನಾತಕೋತ್ತರ ಪದವಿಗಳನ್ನು ಆರಂಭಿಸಲು ಕಾಲೇಜುಗಳು ಅರ್ಜಿ ಸಲ್ಲಿಸಬೇಕಾಗುತ್ತದೆ. 2019–20ರ ಶೈಕ್ಷಣಿಕ ವರ್ಷಕ್ಕೆ ಸೀಟುಗಳನ್ನು ಹೆಚ್ಚಿಸಲು ಅನುಮತಿ ನೀಡುವ ಮೊದಲು ಎಂಸಿಐ ಪರಿಶೀಲನೆ ನಡೆಸುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT