ಶಿಕ್ಷೆ ಒಪ್ಪಿಕೊಂಡ ವಾರ್ನರ್‌

ಬುಧವಾರ, ಮಾರ್ಚ್ 27, 2019
22 °C
ಚೆಂಡು ವಿರೂಪಗೊಳಿಸಿದ ಪ್ರಕರಣ: ಶಿಕ್ಷೆ ಪ್ರಶ್ನಿಸದಿರಲು ನಿರ್ಧಾರ

ಶಿಕ್ಷೆ ಒಪ್ಪಿಕೊಂಡ ವಾರ್ನರ್‌

Published:
Updated:
ಶಿಕ್ಷೆ ಒಪ್ಪಿಕೊಂಡ ವಾರ್ನರ್‌

ಮೆಲ್ಬರ್ನ್‌ : ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ವಿಧಿಸಿರುವ ಒಂದು ವರ್ಷದ ನಿಷೇಧ ಶಿಕ್ಷೆಯನ್ನು ಅನುಭವಿಸಲು ಬದ್ಧ ಎಂದು ಆಸ್ಟ್ರೇಲಿಯಾ ತಂಡದ ಸ್ಟೀವ್‌ ಸ್ಮಿತ್‌ ಹಾಗೂ ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ ಅವರು ನಿರ್ಧರಿಸಿದ ಬೆನ್ನಲ್ಲೇ, ಮತ್ತೊಬ್ಬ ಆಟಗಾರ ಡೇವಿಡ್‌ ವಾರ್ನರ್‌ ಕೂಡ ಶಿಕ್ಷೆ

ಒಪ್ಪಿಕೊಂಡಿರುವುದಾಗಿ ಗುರುವಾರ ಹೇಳಿದ್ದಾರೆ.

‘ಶಿಕ್ಷೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡಿದ್ದೇನೆ. ಇದನ್ನು ಸಿಎಗೆ ಗುರುವಾರ ಸ್ಪಷ್ಟವಾಗಿ ತಿಳಿಸಿದ್ದೇನೆ. ನಾನು ಮಾಡಿದ ತಪ್ಪಿಗೆ ಇನ್ನೊಮ್ಮೆ ಕ್ಷಮೆ ಕೇಳುತ್ತೇನೆ. ಒಬ್ಬ ಉತ್ತಮ, ಅನುಕರಣೀಯ ವ್ಯಕ್ತಿಯಾಗಲು ಅಗತ್ಯವಿರುವ ಎಲ್ಲ ಬದಲಾವಣೆಗಳನ್ನು ಮಾಡಿಕೊಳ್ಳುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.  

ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್‌ ಮತ್ತು ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಿಂದ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ ಅವರಿಗೆ ಒಂಬತ್ತು ತಿಂಗಳು ನಿಷೇಧ ವಿಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry