ಪ್ರತ್ಯೇಕ ಧರ್ಮ ಶಿಫಾರಸು ಅಲ್ಪಸಂಖ್ಯಾತ ಸಚಿವಾಲಯಕ್ಕೆ

6
ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ

ಪ್ರತ್ಯೇಕ ಧರ್ಮ ಶಿಫಾರಸು ಅಲ್ಪಸಂಖ್ಯಾತ ಸಚಿವಾಲಯಕ್ಕೆ

Published:
Updated:
ಪ್ರತ್ಯೇಕ ಧರ್ಮ ಶಿಫಾರಸು ಅಲ್ಪಸಂಖ್ಯಾತ ಸಚಿವಾಲಯಕ್ಕೆ

ನವದೆಹಲಿ: ‘ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ ನೀಡುವ ವಿಚಾರ ನಮ್ಮ ವ್ಯಾಪ್ತಿಗೆ ಬರುವುದೇ ಇಲ್ಲ. ಈ ವಿಚಾರದಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು ಕ್ರಮ ತೆಗೆದುಕೊಳ್ಳಲಿದೆ’ ಎಂದು ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.

‘ಈ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸನ್ನು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣೆ ಸಲುವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ, ಶಿಫಾರಸಿಗೆ ಸಂಬಂಧಿಸಿದಂತೆ ಈಗ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಅನುಮಾನ’ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶಿಫಾರಸನ್ನು ವರ್ಗಾಯಿಸುವ ಮುನ್ನ ಗೃಹ ಸಚಿವಾಲಯ ಅದರಲ್ಲಿ ತನ್ನ ಅಭಿಪ್ರಾಯ ನಮೂದಿಸಿದೆಯೇ ಎಂದು ಕೇಳಿದ ಪ್ರಶ್ನೆಗೆ ಆ ಅಧಿಕಾರಿ ‘ಇಲ್ಲ’ ಎಂದು ಉತ್ತರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry