ಭಾನುವಾರ, ಡಿಸೆಂಬರ್ 15, 2019
19 °C

ತಿನಿಸುಗಳ ಪೊಟ್ಟಣದಲ್ಲಿ ಗಾಂಜಾ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿನಿಸುಗಳ ಪೊಟ್ಟಣದಲ್ಲಿ ಗಾಂಜಾ ಪತ್ತೆ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಗಾಂಜಾ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್‌) ಸಿಬ್ಬಂದಿ ಬಂಧಿಸಿದ್ದಾರೆ.

ನಗರದಿಂದ ಮುಂಬೈ ಮಾರ್ಗವಾಗಿ ದೋಹಾಕ್ಕೆ ಹೊರಟಿದ್ದ ಪ್ರಯಾಣಿಕನನ್ನು ಸಿಐಎಸ್ಎಫ್‌ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದರು. ಆರೋಪಿಯ ಬ್ಯಾಗ್‌ನಲ್ಲಿದ್ದ ತಿನಿಸುಗಳ ಪೊಟ್ಟಣಗಳ ಒಳಗೆ ಗಾಂಜಾ ಪೊಟ್ಟಣಗಳನ್ನು ಬಚ್ಚಿಟ್ಟಿದ್ದನ್ನು ಪತ್ತೆ ಹಚ್ಚಿದ್ದರು. ನಂತರ ಆರೋಪಿಯನ್ನು ಬಂಧಿಸಿ, ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್‌ಸಿಬಿ) ವಶಕ್ಕೆ ಒಪ್ಪಿಸಿದ್ದಾರೆ.

‘ಆರೋಪಿಯಿಂದ 4.7 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದೇವೆ. ಆತ ಕೊಚ್ಚಿನ್‌ ನಿವಾಸಿ ಎಂಬುದು ಗೊತ್ತಾಗಿದೆ. ನ್ಯಾಯಾಂಗ ಬಂಧನಕ್ಕೆ ನೀಡಿದ್ದೇವೆ’ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರತಿಕ್ರಿಯಿಸಿ (+)