ಶುಕ್ರವಾರ, ಡಿಸೆಂಬರ್ 6, 2019
26 °C

ಸಲ್ಮಾನ್‌ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ: ನಾಳೆ ತೀರ್ಪು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಲ್ಮಾನ್‌ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ: ನಾಳೆ ತೀರ್ಪು

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ ಸೆಷೆನ್ಸ್‌ ನ್ಯಾಯಾಲಯ ಪೂರ್ಣಗೊಳಿಸಿದ್ದು, ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದೆ.

1998ರ ಅಕ್ಟೋಬರ್‌ನಲ್ಲಿ ರಾಜಸ್ಥಾನದ ಜೋಧಪುರ ಸಮೀಪದ ಹಳ್ಳಿಯಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ದೋಷಿ ಎಂದು ನ್ಯಾಯಾಲಯ ಹೇಳಿತ್ತು. ಅಲ್ಲದೆ, ವನ್ಯಮೃಗ ಸಂರಕ್ಷಣೆ ಕಾಯ್ದೆಯ 9/51ನೇ ಸೆಕ್ಷನ್‌ ಅಡಿಯಲ್ಲಿ ಐದು ವರ್ಷ ಜೈಲು ಶಿಕ್ಷೆ ಮತ್ತು  ₹10 ಸಾವಿರ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿತ್ತು. ಸದ್ಯ ಸಲ್ಮಾನ್ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು...

20 ವರ್ಷ ಹಳೆಯ ಪ್ರಕರಣದಲ್ಲಿ ಸಲ್ಮಾನ್‌ಗೆ 5 ವರ್ಷ ಶಿಕ್ಷೆ

* ಸಲ್ಮಾನ್ ಬಂಧನ: ಬಾಲಿವುಡ್‌ಗೆ ₹600 ಕೋಟಿ ನಷ್ಟ?

ಪ್ರತಿಕ್ರಿಯಿಸಿ (+)