ತಮಿಳುನಾಡು: ಮುಂದುವರಿದ ರೈತರ ಪ್ರತಿಭಟನೆ

ಶುಕ್ರವಾರ, ಮಾರ್ಚ್ 22, 2019
21 °C

ತಮಿಳುನಾಡು: ಮುಂದುವರಿದ ರೈತರ ಪ್ರತಿಭಟನೆ

Published:
Updated:
ತಮಿಳುನಾಡು: ಮುಂದುವರಿದ ರೈತರ ಪ್ರತಿಭಟನೆ

ಚೆನ್ನೈ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ತಮಿಳುನಾಡಿನ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಡಿಎಂಕೆ ಹಾಗೂ ಇತರ ಪಕ್ಷಗಳು ಕರೆ ನೀಡಿದ್ದ ಬಂದ್‌ನಿಂದ ತಮಿಳುನಾಡಿನಲ್ಲಿ ಗುರುವಾರ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಬಹುತೇಕ ಅಂಗಡಿಗಳು ಮುಚ್ಚಿದ್ದವು. ಡಿಎಂಕೆ, ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಕಾರ್ಯಕರ್ತರು ರಸ್ತೆ ಹಾಗೂ ರೈಲು ಸಂಚಾರ ತಡೆದರು. ಇದರಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದು, ಸಾಕಷ್ಟು ಜನರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈನಲ್ಲಿ ಬಹುತೇಕ ಸರ್ಕಾರಿ ಬಸ್‌ಗಳು ಸಂಚಾರ ನಡೆಸಿವೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ಇತರೆ ಜಿಲ್ಲೆಗಳಲ್ಲಿ ಗಲಭೆ ಉಂಟಾಗಬಹುದು ಎನ್ನುವ ಭೀತಿಯಿಂದ ವಾಹನ ಸಂಚಾರ ವಿರಳವಾಗಿತ್ತು.

ಇನ್ನಷ್ಟು...

ತಮಿಳುನಾಡು ಬಂದ್: ಜನಜೀವನ ಅಸ್ತವ್ಯಸ್ತ

ಕಾವೇರಿ ನದಿ ನೀರು ಹಂಚಿಕೆ ವಿವಾದ: ‘ತಮಿಳುನಾಡು ಬೆದರಿಕೆಗೆ ಮಣಿಯದಿರಿ’

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry