ಅಂಬೇಡ್ಕರ್‌ ಪ್ರತಿಮೆಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

7

ಅಂಬೇಡ್ಕರ್‌ ಪ್ರತಿಮೆಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

Published:
Updated:
ಅಂಬೇಡ್ಕರ್‌ ಪ್ರತಿಮೆಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ನವದೆಹಲಿ: ಮಧ್ಯಪ್ರದೇಶದ ಭಿಂದ್‌ ಖೇರಿಯಾ ಗ್ರಾಮ ಹಾಗೂ ಸತ್ನಾ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. 

ರಾಜಸ್ಥಾನ, ಫಿರೋಜಾಬಾದ್ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳನ್ನು ಶುಕ್ರವಾರ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು.

ಇತ್ತೀಚೆಗೆ ಕಮ್ಯುನಿಸ್ಟ್ ನಾಯಕ ಲೆನಿನ್‌ ಮತ್ತು ಸಮಾಜ ಸುಧಾರಕ ಪೆರಿಯಾರ್‌ ಪ್ರತಿಮೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಮೀರಠ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಮತ್ತು ಕೋಲ್ಕತ್ತದಲ್ಲಿ ಜನಸಂಘ ಸ್ಥಾಪಕ ಶ್ಯಾಮ್‌ ಪ್ರಸಾದ್ ಮುಖರ್ಜಿ ಅವರ ಪುತ್ಥಳಿಗಳನ್ನು ವಿರೂಪಗೊಳಿಸಿದ್ದರು.

ಸದ್ಯ ಮಹಾ ಪುರುಷರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಎಡ ಮತ್ತು ಬಲ ಪಂಥೀಯ ಕಾರ್ಯಕರ್ತರ ರಾಜಕೀಯ ಸಂಘರ್ಷ ತಾರಕಕ್ಕೇರಿದೆ.

ಇನ್ನಷ್ಟು...

ಪ್ರತಿಮೆ ಧ್ವಂಸ: ನಾಚಿಕೆಗೇಡಿನ ಸಂಗತಿ

ನೆಹರೂ ಪ್ರತಿಮೆಗೆ ಕಪ್ಪು ಬಣ್ಣ ಎರಚಿದ ದುಷ್ಕರ್ಮಿಗಳು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry