ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭೀತಿಯಿಂದ ಮತದಾನ ಮಾಡಿ : ಕಲಾದಗಿ

Last Updated 6 ಏಪ್ರಿಲ್ 2018, 10:00 IST
ಅಕ್ಷರ ಗಾತ್ರ

ಕೊಪ್ಪಳ: ಮಹಿಳಾ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ನೈತಿಕವಾಗಿ ಮತದಾನ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ ಕರೆ ನೀಡಿದರು.ಗಂಗಾವತಿ ಶಿಶು ಅಭಿವೃದ್ಧಿ ಯೋಜನೆಯ ಕೇಸರಹಟ್ಟಿ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಮತದಾರರಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ನಮ್ಮ ಸಂವಿಧಾನ ಮತದಾನದ ಹಕ್ಕನ್ನು ನಮಗೆ ನೀಡಿದೆ. ಮೇ 12ರಂದು ನಡೆಯುವ ಚುನಾವಣೆಯಲ್ಲಿ ಈ ಹಕ್ಕನ್ನು ತಪ್ಪದೆ ಚಲಾಯಿಸಬೇಕು ಎಂದರು.

ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್ ಮಾತನಾಡಿ, ಮಹಿಳಾ ಮತದಾರೆಲ್ಲರೂ ತಪ್ಪದೆ ಮತದಾನದಲ್ಲಿ ಪಾಲ್ಗೊಳ್ಳಬೇಕು. ಇತರರನ್ನೂ ಮತದಾನಕ್ಕೆ ಪ್ರೇರೇಪಿಸಬೇಕು' ಎಂದರು.ಪ್ರಭಾರ ಶಿಶು ಅಭಿವೃದ್ಧಿ ಯೋಜನಾ‌ಧಿಕಾರಿ ಜಯಶ್ರೀ, ಕೇಸರಹಟ್ಟಿ ಗ್ರಾಮದ ಮಹಿಳಾ ಮತದಾರರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT