ಗುತ್ತಿಗೆ ನೌಕರರ ಪ್ರತಿಭಟನೆ

7
ಕೆಲಸದಿಂದ ವಜಾಗೊಳಿಸಿದ್ದಕ್ಕೆ ಖಂಡನೆ

ಗುತ್ತಿಗೆ ನೌಕರರ ಪ್ರತಿಭಟನೆ

Published:
Updated:

ಮೈಸೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ 61 ನೌಕರರನ್ನು ಕೆಲಸದಿಂದ ತೆಗೆದುಹಾಕಿದ ಬಿಎಸ್‌ಎನ್‌ಎಲ್‌ ಕ್ರಮವನ್ನು ಖಂಡಿಸಿ ರಾಜ್ಯ ಬಿಎಸ್‌ಎನ್‌ಎಲ್‌ ಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಯಲಕ್ಷ್ಮಿಪುರಂನ ಕೇಂದ್ರ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಎಲ್ಲ ನೌಕರರನ್ನು ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 61 ನೌಕರರನ್ನು ಏ.1ರಂದು ವಜಾಗೊಳಿಸಲಾಗಿದೆ. ಇದೇ ಉದ್ಯೋಗ ನಂಬಿಕೊಂಡು ಬದುಕುತ್ತಿದ್ದವರು ಬೀದಿಗೆ ಬೀಳುವ ಸ್ಥಿತಿಗೆ ತಲುಪಿದ್ದಾರೆ. ಕಾರ್ಮಿಕ ಕಾನೂನು ಗಾಳಿಗೆ ತೂರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲಸದ ಅವಧಿ ಮುಗಿದ ಮೇಲೂ ಅಧಿಕಾರಿಗಳ ತೋಟ ಹಾಗೂ ಮನೆಯಲ್ಲಿ ಕೆಲಸ ಮಾಡಬೇಕಿತ್ತು. ಇದನ್ನು ಪ್ರಶ್ನಿಸಿದ ಕಾರಣಕ್ಕೆ ಕಾರ್ಮಿಕರ ಮೇಲೆ ಸೇಡು ತೀರಿಸಿಕೊಳ್ಳಲಾಗಿದೆ. ಈ ಕಿರುಕುಳ ಕೂಡಲೇ ನಿಲ್ಲಬೇಕು. ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry