ಮೇ 3ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ತನ್ವೀರ್‌ ಸೇಠ್‌

ಬುಧವಾರ, ಮಾರ್ಚ್ 20, 2019
25 °C

ಮೇ 3ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ತನ್ವೀರ್‌ ಸೇಠ್‌

Published:
Updated:
ಮೇ 3ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ತನ್ವೀರ್‌ ಸೇಠ್‌

ಬೆಂಗಳೂರು: ಮೇ 3ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಹೇಳಿದರು.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ‘ಇಂದು (ಶುಕ್ರವಾರ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದ್ದು, ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ’ ಎಂದು ತಿಳಿಸಿದರು.

ಈ ಬಾರಿ ಒಟ್ಟು 33 ವಿಷಯಗಳಲ್ಲಿ ಪರೀಕ್ಷೆ ನಡೆದಿದೆ. 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದೇ 16ರಿಂದ 25ರ ವರೆಗೆ ಮೌಲ್ಯಮಾಪನ ನಡೆಯಲಿದೆ ಎಂದರು. 

ಈ ವರ್ಷ 2.73 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳಲ್ಲಿ 51 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ಮಾಹಿತಿ ನೀಡಿದರು.

ಮೇ.8 ರಂದು ‘ಕೀ ಉತ್ತರ’ಗಳನ್ನು ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶದ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮೇ 8ರಿಂದ 10ರವರೆಗೆ ಅವಕಾಶ ನೀಡಲಾಗುವುದೆಮದು ತಿಳಿಸಿದರು.

ಕಳೆದ ವರ್ಷ ಗಣಿತ ವಿಷಯದಲ್ಲಿ 16 ವಿದ್ಯಾರ್ಥಿಗಳು ಡಿಬಾರ್ ಆಗಿದ್ದರು. ಈ ಬಾರಿ 21 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದರು.

ಕಳೆದ ಬಾರಿ ಶೇಕಡಾ 73.47 ಫಲಿತಾಂಶ ಬಂದಿದ್ದು, ಈ ಬಾರಿ ಇನ್ನೂ ಉತ್ತಮ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry