ನವದೆಹಲಿ (ಪಿಟಿಐ): ‘ಉದ್ಯಮ ವಲಯದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿರುವುದು ವಿಷಾದಕರ ಸಂಗತಿಯಾಗಿದೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದಾರೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ಮಹಿಳಾ ಸಂಘಟನೆ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ‘ಮಹಿಳೆಯರು ಮನೆ ಮತ್ತು ಕಚೇರಿಗಳಲ್ಲಿ ದುಡಿಯುತ್ತ ದೇಶಿ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ಆದರೆ, ಉದ್ದಿಮೆ ಕ್ಷೇತ್ರದಲ್ಲಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸ್ಥಾನಮಾನ ದೊರೆಯುತ್ತಿಲ್ಲ’ ಎಂದರು.

‘ಮಹಿಳೆಯರು ಉದ್ಯಮ ವಲಯದಲ್ಲಿ ಯಶಸ್ಸು ಸಾಧಿಸಲು ನೆರವಾಗುವಂತಹ ಮಹಿಳಾ ಸ್ನೇಹಿಯಾದ ಉಪಕ್ರಮಗಳನ್ನು ಕಾರ್ಪೊರೇಟ್ ಜಗತ್ತು ಕೈಗೊಳ್ಳಬೇಕು. ದುಡಿಯುವ ವರ್ಗದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದರೆ ಅದರಿಂದ ಕೌಟುಂಬಿಕ ವರಮಾನ ಮತ್ತು ಜಿಡಿಪಿ ಹೆಚ್ಚಳಗೊಳ್ಳಲಿದೆ. ಮಹಿಳೆಯರಲ್ಲಿ ಉದ್ಯಮಶೀಲತೆ ಪ್ರವೃತ್ತಿ ಬೆಳೆಸುವಂತಹ ಕ್ರಮಗಳನ್ನು ಸರ್ಕಾರ ಜಾರಿಗೆ ತರಬೇಕು’ ಎಂದು ಸಲಹೆ ನೀಡಿದರು. ಉದ್ಯಮಿ ಟ್ವಿಂಕಲ್ ಖನ್ನಾ, ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್, ವಿಜ್ಞಾನಿ ಟೆಸ್ಸಿ ಥಾಮಸ್ ಸೇರಿದಂತೆ 9 ಮಂದಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.