ಭಾನುವಾರ, ಡಿಸೆಂಬರ್ 15, 2019
23 °C

ತೆರಿಗೆ ವಂಚನೆ: ವಾದ್ರಾ ಕಂಪೆನಿ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೆರಿಗೆ ವಂಚನೆ: ವಾದ್ರಾ ಕಂಪೆನಿ ಅರ್ಜಿ ವಜಾ

ನವದೆಹಲಿ : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸ್‌ ಪ್ರಶ್ನಿಸಿ ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಸೇರಿದ ದೆಹಲಿಯ ಸ್ಕೈಲೈಟ್‌ ಹಾಸ್ಪಿಟಾಲಿಟಿ ಎಲ್‌ಎಲ್‌ಪಿ ಕಂಪೆನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

2010–11ರಲ್ಲಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಕಂಪೆನಿ ನಡೆಸಿದ ಭೂವ್ಯವಹಾರಗಳಿಂದ ಗಳಿಸಿದ ಲಾಭಕ್ಕೆ ಸಂಬಂಧಿಸಿದಂತೆ ಮರು ಲೆಕ್ಕಪತ್ರ ವಿವರ ಸಲ್ಲಿಸುವಂತೆ ಆದಾಯ ತೆರಿಗೆ ಇಲಾಖೆ ವಾದ್ರಾ ಅವರ ಕಂಪೆನಿಗೆ ನೋಟಿಸ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಸ್ಕೈಲೈಟ್‌ ಕಂಪೆನಿ  ದೆಹಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಆದರೆ, ಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶದ ವಿರುದ್ಧ ಕಂಪೆನಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಹೈಕೋರ್ಟ್ ಆದೇಶದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದೆ.

ಪ್ರತಿಕ್ರಿಯಿಸಿ (+)