ಮಂಗಳವಾರ, ಜೂಲೈ 7, 2020
25 °C

ಸಲ್ಮಾನ್ ಜಾಮೀನು ನಿರ್ಣಯ ಇಂದು

ಪಿಟಿಐ Updated:

ಅಕ್ಷರ ಗಾತ್ರ : | |

ಸಲ್ಮಾನ್ ಜಾಮೀನು ನಿರ್ಣಯ ಇಂದು

ಜೋಧಪುರ (ಪಿಟಿಐ): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿಯ ನಿರ್ಣಯವನ್ನು ಸೆಷನ್ಸ್‌ ನ್ಯಾಯಾಲಯ ಶನಿವಾರದವ

ರೆಗೆ ಕಾಯ್ದಿರಿಸಿದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್‌ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಗುರುವಾರ ತೀರ್ಪು ನೀಡಿತ್ತು. ಗುರುವಾರವೇ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಮುಂದೂಡಿರುವುದರಿಂದ ಮತ್ತೊಂದು ರಾತ್ರಿಯನ್ನು ಅವರು ಜೈಲಿನಲ್ಲಿ ಕಳೆಯುವುದು ಅನಿವಾರ್ಯವಾಗಿದೆ.

ಶಿಕ್ಷೆ ರದ್ದುಪಡಿಸುವಂತೆ ಹಾಗೂ ಜಾಮೀನು ನೀಡುವಂತೆ ಸೆಷನ್ಸ್‌ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಅವರ ಮುಂದೆ ಸಲ್ಮಾನ್‌ ಅರ್ಜಿ ಸಲ್ಲಿಸಿದ್ದಾರೆ.

ಸಲ್ಮಾನ್ ಖಾನ್ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾದ್ದರಿಂದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಸಚಿವ ಖ್ವಾಜಾ ಆಸಿಫ್ ಗುರುವಾರ ಹೇಳಿದ್ದಾಗಿ ಪಾಕಿಸ್ತಾನದ ಸುದ್ದಿಸಂಸ್ಥೆ ವರದಿ ಮಾಡಿತ್ತು. 

ಈ ಹೇಳಿಕೆಯನ್ನು ಮಣಿಪುರ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಖಂಡಿಸಿದ್ದಾರೆ. ‘ಭಾರತದ ಆಂತರಿಕ ವ್ಯವಹಾರಗಳಲ್ಲಿ ಮಧ್ಯ

ಪ್ರವೇಶಿಸಲು ಪಾಕಿಸ್ತಾನ ಸಚಿವರಿಗೆ ಯಾವುದೇ ಹಕ್ಕಿಲ್ಲ’ ಎಂದು ಹೆಫ್ತುಲ್ಲಾ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.