ಗುರುವಾರ , ಡಿಸೆಂಬರ್ 12, 2019
20 °C

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಕುಮಾರಸ್ವಾಮಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಕುಮಾರಸ್ವಾಮಿ ಆರೋಪ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ‌ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದು, ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.

‘ಮುಖ್ಯಮಂತ್ರಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ರಾಜ್ಯ ಗುಪ್ತಚರ ದಳ ವರದಿ ನೀಡಿದೆ. ಚುನಾವಣೆ ಘೋಷಣೆಯಾದ ಮೇಲೂ ವರದಿ ಪಡೆದಿರುವುದು ಅಧಿಕಾರ ದುರುಪಯೋಗಕ್ಕೆ ಸಾಕ್ಷಿಯಾಗಿದೆ’ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೆ ಉತ್ತಮ ಎಂಬ ಬಗ್ಗೆ ರಾಜ್ಯ ಗುಪ್ತಚರ ದಳ ನೀಡಿದೆ ಎನ್ನಲಾಗುತ್ತಿರುವ ವರದಿಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದನ್ನು ಗುಪ್ತಚರ ದಳ ದೃಢಪಡಿಸಿಲ್ಲ. ಆ ಚಿತ್ರ ನಕಲಿ ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)