ಗುರುವಾರ , ಡಿಸೆಂಬರ್ 12, 2019
20 °C

ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆ: ಹಿಮಾಚಲ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆ: ಹಿಮಾಚಲ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನ

ಹಿಮಾಚಲ ಪ್ರದೇಶ: ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಡಿಎವಿ ಶಾಲೆಯ ಪರೀಕ್ಷಾ ಕೊಠಡಿಯ ಮೇಲ್ವಿಚಾರಕ ರಾಕೇಶ್‌, ಕ್ಲರ್ಕ್‌ ಅಮಿತ್‌, ಸಹಾಯಕ ಸಿಬ್ಬಂದಿ ಅಶೋಕ್‌ ಅವರನ್ನು ಬಂಧಿಸಿರುವುದಾಗಿ ಶನಿವಾರ ಪೊಲೀಸರು ತಿಳಿಸಿದ್ದಾರೆ. 

ದೇಶದಾದ್ಯಂತ ಮಾರ್ಚ್‌ನಲ್ಲಿ ನಡೆದ ಸಿಬಿಎಸ್‌ಇ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.

ಇದನ್ನೂ ಓದಿ...

ಕಾವಲಿದ್ದ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಸೋರಿಕೆ

10ನೇ ತರಗತಿ ಗಣಿತ ಮರುಪರೀಕ್ಷೆ ಇಲ್ಲ

ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ತಿಳಿದಿದ್ದರೂ ಸಿಬಿಎಸ್‍ಇ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದು ಯಾಕೆ?

ಪ್ರತಿಕ್ರಿಯಿಸಿ (+)