ಭಾನುವಾರ, ಡಿಸೆಂಬರ್ 15, 2019
19 °C

ನೂತನ ನ್ಯಾಯಾಲಯ ಸಂಕೀರ್ಣಕ್ಕೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೂತನ ನ್ಯಾಯಾಲಯ ಸಂಕೀರ್ಣಕ್ಕೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

ಹುಬ್ಬಳ್ಳಿ: ಹೊಸೂರು-ಉಣಕಲ್ ಕ್ರಾಸ್ ಮುಖ್ಯರಸ್ತೆಯಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹವಾನಿಯಂತ್ರಿತ ಹಾಗೂ ಸಕಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳುವಂತೆ ಪಿಡಬ್ಲ್ಯು ಡಿ ಅಧಿಕಾರಿಗಳಿಗೆ ಸೂಚಿಸಿದರು.

ನೂತನ ನ್ಯಾಯಾಲಯ ಸಂಕೀರ್ಣವನ್ನು ಶೀಘ್ರವೇ ಉದ್ಘಾಟನೆ‌ ಮಾಡಲಾಗುವುದು. ದಿನಾಂಕ ಮುಂದೆ ಪ್ರಕಟಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್‌.ಡಿ.ಹುದ್ದಾರ ತಿಳಿಸಿದರು.

ಪ್ರತಿಕ್ರಿಯಿಸಿ (+)