ಬುಧವಾರ, ಆಗಸ್ಟ್ 5, 2020
23 °C

ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ವಿರೋಧ; ಏ.12ಕ್ಕೆ ಎನ್‌ಡಿಎ ಸಂಸದರ ಉಪವಾಸ ಸತ್ಯಾಗ್ರಹ: ಅನಂತ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ವಿರೋಧ; ಏ.12ಕ್ಕೆ ಎನ್‌ಡಿಎ ಸಂಸದರ ಉಪವಾಸ ಸತ್ಯಾಗ್ರಹ: ಅನಂತ ಕುಮಾರ್‌

ಬೆಂಗಳೂರು: ಇದೇ 12ರಂದು ಬಿಜೆಪಿ ಮತ್ತು ಎನ್‌ಡಿಎ ಸಂಸದರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆ ವಿರೋಧಿಸಿ ದೇಶಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ ತಿಳಿಸಿದರು.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂಸತ್ ಅಧಿವೇಶನ ಹಾಳಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರ ಅಸಹಿಷ್ಣುತೆ ಕಾರಣ ಎಂದರು.

ಇದೇ 14 ರಿಂದ ಮೇ 5 ರವರೆಗೆ ಅಂಬೇಡ್ಕರ್ ಜಯಂತಿ ಅಂಗವಾಗಿ ದೇಶದಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು ಹಳ್ಳಿಗಳಿಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಲಿದ್ದಾರೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.