ಮಾತೆ ಮಹಾದೇವಿ ನಿಲುವು ಸರಿಯಲ್ಲ: ಹೊರಟ್ಟಿ

7

ಮಾತೆ ಮಹಾದೇವಿ ನಿಲುವು ಸರಿಯಲ್ಲ: ಹೊರಟ್ಟಿ

Published:
Updated:

ಹುಬ್ಬಳ್ಳಿ: ‘ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿರುವುದು ಸರಿಯಲ್ಲ’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

‘ಪಕ್ಷಾತೀತವಾಗಿ ಹೋರಾಟ ನಡೆದಿದೆ. ಬಿಜೆಪಿ ಬೆಂಬಲಿಸಬೇಕು ಎಂದು ಪಂಚಪೀಠದವರು ಹೇಳಿದಾಗ ಖಂಡಿಸಿದ್ದೇವೆ. ಈಗ ನಾವೂ ಅದೇ ದಾರಿಯಲ್ಲಿ ಸಾಗಲು ಸಾಧ್ಯವಿಲ್ಲ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಲಿಂಗಾಯತರ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂಬ ನಿರ್ಧಾರ ತೆಗೆದುಕೊಂಡಿಲ್ಲ. ಯಾರು ಪ್ರತ್ಯೇಕ ಧರ್ಮ ರಚನೆಗೆ ಬೆಂಬಲ ನೀಡುತ್ತಾರೋ, ಅವರಿಗೆ ಬೆಂಬಲ ಕೊಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿದ್ದ ಎಸ್‌.ಎಂ. ಜಾಮದಾರ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry