ಜಿ.ಪಂ ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ರಾಜೀನಾಮೆ

7

ಜಿ.ಪಂ ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ರಾಜೀನಾಮೆ

Published:
Updated:

ಚಿತ್ರದುರ್ಗ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರು ಕೊನೆಗೂ ಶನಿವಾರ ಸಂಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ತಮಗೆ ಅಥವಾ ಪತಿ ಬಸವರಾಜನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸುವುದಕ್ಕಾಗಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಪಕ್ಷದ ಆಂತರಿಕ ಒಡಂಬಡಿಕೆಯಂತೆ 20 ತಿಂಗಳ ನಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರು.

ಮುಖ್ಯಮಂತ್ರಿ ಆದಿಯಾಗಿ ಹಲವು ನಾಯಕರು ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಸೌಭಾಗ್ಯ ಅವರಿಗೆ ಸೂಚಿಸಿದ್ದರು. ಆದರೆ, 'ಚುನಾವಣೆಗೆ ಟಿಕೆಟ್ ಖಚಿತವಾಗುವವರೆಗೂ ರಾಜೀನಾಮೆ ನೀಡುವುದಿಲ್ಲ' ಎಂದು ಅವರು ಹಠ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ 2017 ರ ನವೆಂಬರ್ 28 ರಂದು ಸೌಭಾಗ್ಯ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry