ಗುರುವಾರ , ಆಗಸ್ಟ್ 13, 2020
21 °C

ಬೆಂಗಳೂರಿನ ಏಳು ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ಏಳು ಮಂದಿ ಸಾವು

ವಿರುದುನಗರ್‌ (ತಮಿಳುನಾಡು): ಜಿಲ್ಲೆಯ ರಾಜಪಾಳ್ಯಂ ಬಳಿ ನಡೆದ ಅಪಘಾತದಲ್ಲಿ ಬೆಂಗಳೂರು ಮೂಲದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರಿನ ಲಕ್ಷ್ಮಿ ನಾರಾಯಣ, ರತ್ನ, ಕಲಾವತಿ, ಶಂಕ್ರೆಗೌಡ, ಧರ, ಕಿರ್ತಿಕಾ, ಪ್ರವಿಣ್ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿಯಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ಬೆಂಗಳೂರು ಮೂಲದ ಕುಟುಂಬ ಕೇರಳ ಪ್ರವಾಸ ಮುಗಿಸಿಕೊಂಡು ತಿರುವುನಂತಪುರ ಮಾರ್ಗವಾಗಿ ತವರಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಲಾರಿ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಿಂದಾಗಿ ರಾಜಪಾಳ್ಯಂ– ತೆಂಕಸಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಸಂಚಾರ ದಟ್ಟಣೆ ಉಂಟಾಯಿತು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.