ಸೋಮವಾರ, ಜೂಲೈ 13, 2020
23 °C

ಸಲ್ಮಾನ್‌ ಖಾನ್‌ಗೆ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಸಲ್ಮಾನ್‌ ಖಾನ್‌ಗೆ ಜಾಮೀನು

ಜೋಧಪುರ: 20 ವರ್ಷಗಳ ಹಿಂದಿನ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಒಳಗಾದ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಜೋಧಪುರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಸಲ್ಮಾನ್‌ ಖಾನ್‌ ಮತ್ತು ಅವರ ಮೇಲೆ ಹಣ ಹೂಡಿದ್ದ ಬಾಲಿವುಡ್‌ ಮಂದಿ ಸದ್ಯಕ್ಕೆ ನಿರಾಳರಾಗಿದ್ದಾರೆ. ಜಾಮೀನು ಆದೇಶ ಪ್ರತಿ ದೊರೆಯು

ತ್ತಲೇ ಸಂಜೆ ಜೋಧಪುರ ಜೈಲಿನಿಂದ ಹೊರಬಂದ 52 ವರ್ಷದ ಸಲ್ಮಾನ್‌, ಪೊಲೀಸರ ಬಿಗಿ ಭದ್ರತೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಅಲ್ಲಿಂದ ಅವರು ನೇರವಾಗಿ ಮುಂಬೈಗೆ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.