ಜಿಗ್ನೇಶ್‌ ರಾಜ್ಯ ಪ್ರವೇಶಕ್ಕೆ ನಿರ್ಬಂಧ: ಬಿಜೆಪಿ ಆಗ್ರಹ

7

ಜಿಗ್ನೇಶ್‌ ರಾಜ್ಯ ಪ್ರವೇಶಕ್ಕೆ ನಿರ್ಬಂಧ: ಬಿಜೆಪಿ ಆಗ್ರಹ

Published:
Updated:

ಬೆಂಗಳೂರು: ಗುಜರಾತ್ ಶಾಸಕ ಜಿಗ್ನೇಶ್‌ ಮೇವಾನಿಗೆ ರಾಜ್ಯದೊಳಗೆ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ರಾಜ್ಯ ಬಿಜೆಪಿ ಮುಖ್ಯ ಚುನಾವಣಾಧಿಕಾರಿ  ಸಂಜೀವ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದೆ.

ಚಿತ್ರದುರ್ಗದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಗಲಭೆ ಎಬ್ಬಿಸುವಂತೆ ಯುವಕರಿಗೆ  ಜಿಗ್ನೇಶ್‌ ಪ್ರಚೋದನೆ ನೀಡಿದ್ದಾರೆ. ಇದರಿಂದ ರಾಜ್ಯದಲ್ಲಿ ಶಾಂತಿ– ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ದೂರಿನಲ್ಲಿ ಬಿಜೆಪಿ ತಿಳಿಸಿದೆ.

ಈ ರೀತಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಮಹಾರಾಷ್ಟ್ರದಲ್ಲಿ ಜಿಗ್ನೇಶ್‌ ಹೇಳಿಕೆಯಿಂದ ಗಲಭೆ ಆಗಿತ್ತು ಎಂದೆ.

ಡಾ. ಹರ್ಷ ಕಾಂಗ್ರೆಸ್‌ ಪರ: ವಾರ್ತಾ ಇಲಾಖೆ ನಿರ್ದೇಶಕ ಡಾ.ಹರ್ಷ ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ಸಲ್ಲಿಸಿದೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಾಗಿರುವ ಜಾಹೀರಾತು ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿರುವ ವಾರ್ತಾ ಇಲಾಖೆ, ಕಾಂಗ್ರೆಸ್‌ ಪರ ಪ್ರಚಾರ ಮಾಡದಿದ್ದರೆ, ಬಿಲ್‌ ಪಾವತಿ ಮಾಡುವುದಿಲ್ಲ ಎಂದು ಬ್ಲಾಕ್‌ಮೇಲ್‌ ಮಾಡುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry