ಸೋಮವಾರ, ಜೂಲೈ 13, 2020
22 °C

ಧಾರವಾಡದಲ್ಲಿ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡದಲ್ಲಿ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ

ಧಾರವಾಡ: ಇಲ್ಲಿನ ಹಳಿಯಾಳ ಮಾರ್ಗ ಮಧ್ಯೆ ಮುರಕಟ್ಟಿ ಕ್ರಾಸ್ ಬಳಿ ಭಾನುವಾರ ಬೆಳಿಗ್ಗೆ ಟವೇರಾ ಕಾರ್‌ಗೆ ಸರ್ಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಧಾರವಾಡದಿಂದ ಹಳಿಯಾಳಕ್ಕೆ ಹೊರಟಿದ್ದ ಟವೇರಾದಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಧಾರವಾಡದ ಕಂಠಿ ಓಣಿ ನಿವಾಸಿಗಳಾದ ಇಮ್ರಾನ್ ಮಕಾನ್‌ದಾರ, ಆಫ್ರೀನ್ ಮಕಾನ್‌ದಾರ ಹಾಗೂ ಇವರ ಮಗಳು ಅಲ್ಸಿಯಾ ಎಂದು ಗುರುತಿಸಲಾಗಿದೆ. ಚಾಲಕ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಳ್ನಾವರ ಪೊಲೀಸರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.