ಮಂಗಳವಾರ, ಡಿಸೆಂಬರ್ 10, 2019
26 °C

ಅಕ್ರಮ ಸಾಗಣೆ: 101 ಲೀಟರ್ ಮದ್ಯ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಕ್ರಮ ಸಾಗಣೆ: 101 ಲೀಟರ್ ಮದ್ಯ ವಶ

ಬೆಳಗಾವಿ: ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಐವರನ್ನು ತಪಾಸಣಾ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಬಂಧಿಸಿದ್ದು, 101 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.

ಬಂಧಿತರಿಂದ ಮೂರು ದ್ವಿಚಕ್ರ ವಾಹನ, 65 ಲೀಟರ್ ಗೋವಾ ಮದ್ಯ ಹಾಗೂ 36 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯಪುರ ವರದಿ: ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹60 ಲಕ್ಷ ನಗದನ್ನು ಸೊಲ್ಲಾಪುರದ ನಾಕಾದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದರು. 

ಪ್ರತಿಕ್ರಿಯಿಸಿ (+)