7

ಮೆಟ್ರೊದಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ

Published:
Updated:
ಮೆಟ್ರೊದಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಭಾನುವಾರ ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು.

ರಾಹುಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಸಚಿವ ಕೆ.ಜೆ ಜಾರ್ಜ್‌ ಸೇರಿದಂತೆ ಹಲವು ಮುಖಂಡರು ಸಾಥ್‌ ನೀಡಿದರು.

ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಎಲ್ಲ ಮುಖಂಡರಿಗೆ ಮುಖ್ಯಮಂತ್ರಿಗಳೇ ಟಿಕೆಟ್‌ ಖರೀದಿಸಿದರೂ ಎಂದು ಹೇಳಲಾಗಿದೆ.

ಸಂಜೆ ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ.

ನಗರ ಜಕ್ಕರಾಯನಕೆರೆ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಪೌರಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಬಳಿಕ  ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಉದ್ಯಮಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ...

ನಿಮ್ಮ ಕುಟುಂಬದ ಜವಾಬ್ದಾರಿ ನಮಗೆ ಬಿಡಿ: ಪೌರಕಾರ್ಮಿಕರಿಗೆ ರಾಹುಲ್ ಗಾಂಧಿ ಅಭಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry